ಉಗ್ರರ ದಾಳಿ ಖಂಡಿಸಿ ಸುಳ್ಯದಲ್ಲಿ ಪ್ರತಿಭಟನೆ

0
28

ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆಗೆ ಬೆಂಬಲ

ಸುಳ್ಯ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯನ್ನು ಖಂಡಿಸಿ ರಾಷ್ಟ್ರೀಯವಾದಿ ಸಂಘಟನೆಗಳ ನೇತೃತ್ವದಲ್ಲಿ ಸುಳ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ಮೂಲಕ ಉಗ್ರರ ಹುಟ್ಟಡಗಿಸಿದಂತೆ ಮತ್ತೊಮ್ಮೆ‌ ಸರ್ಜಿಕಲ್ ಸ್ಟ್ರೈಕ್ ನಡೆಸಿ ಅಮಾಯಕರನ್ನು ಕೊಂದ ಉಗ್ರರಿಗೆ ಕೇಂದ್ರ ಸರಕಾರ ತಕ್ಕ ಉತ್ತರ ನೀಡಬೇಕು ಎಂದು ಪ್ರತಿಭಟನೆಯಲ್ಲಿ‌ ಮಾತನಾಡಿದ ಪ್ರಮುಖರು ಒತ್ತಾಯಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ಪ್ರಮುಖರಾದ ಜಿ.ಜಿ.ನಾಯಕ್,ರಾಜೇಶ್ ಮೇನಾಲ, ವಿನಯಕುಮಾರ್ ಕಂದಡ್ಕ ಮಾತನಾಡಿದರು.
ಸುಬೋದ್ ಶೆಟ್ಟಿ ಮೇನಾಲ ಕಾರ್ಯಕ್ರಮ ನಿರೂಪಿಸಿದರು.
ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ್, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಧಾಕರ ಕಾಮತ್, ಅಶೋಕ್ ಪ್ರಭು, ಪ್ರಬೋದ್ ಶೆಟ್ಟಿ ಮೇನಾಲ, ಕೇಶವ ನಾಯಕ್, ದಯಾನಂದ ಕೇರ್ಪಳ, ಸುಧಾಕರ ಕುರುಂಜಿಭಾಗ್, ಶಿವರಾಮ ಕೇರ್ಪಳ, ಪೂಜಿತಾ ಕೆ.ಯು. , ಸುಶೀಲ ಜಿನ್ನಪ್ಪ , ಚಂದ್ರಶೇಖರ ಅಡ್ಪಂಗಾಯ, ಹೇಮಂತ್ ಮಠ, ದಾಮೋದರ ಮಂಚಿ, ಜಗದೀಶ್ ಸರಳಿಕುಂಜ, ಮಧುಸೂದನ್, ಹೇಮಂತ್ ಕಂದಡ್ಕ, ದೇವರಾಜ್ ಕುದ್ಪಾಜೆ, ಶಿವನಾಥ ರಾವ್, ಅನೂಪ್ ಪೈ ಮತ್ತಿತರರು ಉಪಸ್ಥಿತರಿದ್ದರು ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ರಿಕ್ಷಾ ಚಾಲಕರು ಓಡಾಟ ನಿಲ್ಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.

Previous articleಪ್ರವಾಸಿಗರ ರಕ್ಷಣೆ ಮಾಡಲು ಭಯೋತ್ಪಾದಕರ ವಿರುದ್ಧ ಹೋರಾಡಿ ಮೃತಪಟ್ಟ ಆದಿಲ್ ಹುಸೇನ್
Next articleಉಗ್ರರ ದಾಳಿ: ಮಾಹಿತಿ ಕೊರತೆ, ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ