ಉಡಾನ್ ಯೋಜನೆಯಿಂದ ಟೈಯರ್ ಟು ಸಿಟಿಗಳ ಅಭಿವೃದ್ಧಿ

0
4

ಕೇಂದ್ರ ಬಜೆಟ್ -2025-26 ಒಂದು ಅಭಿವೃದ್ಧಿಪರ ಮತ್ತು ಜನಸಾಮಾನ್ಯರ ಬಜೆಟ್ ಆಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ
ಬಜೆಟ್‌ ಕುರಿತಂತೆ ಮಾತನಾಡಿರುವ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ 2025-26 ಅತ್ಯಂತ ಸ್ವಾಗತಾರ್ಹ ಮತ್ತು ಅಭಿವೃದ್ಧಿ ಪರವಾದ ಬಜೆಟ್ ಆಗಿದೆ.

ದೇಶದ ಜನರ ನಿರೀಕ್ಷೆಯಂತೆ ಈ ಬಜೆಟ್ ಅತ್ಯುತ್ತಮವಾಗಿದ್ದು, ರೈತರು, ಉದ್ದಿಮೆದಾರರು, ಮಧ್ಯಮ ವರ್ಗದವರು ಸೇರಿದಂತೆ ಜನಸಾಮಾನ್ಯರ ಅಭಿವೃದ್ಧಿ ಮತ್ತು ಹಿತಾಸಕ್ತಿಯನ್ನು ಆಲೋಚಿಸಿ ಬಜೆಟ್ ಮಂಡನೆ ಮಾಡಲಾಗಿದೆ.

ಮಧ್ಯಮ ವರ್ಗದ ಜನರ ಬಹು ವರ್ಷಗಳ ಬೇಡಿಕೆಯಾದ ಆದಾಯ ತೆರಿಗೆಗೆ ಸಂಬಂಧಿಸಿದಂತೆ 12 ಲಕ್ಷ ರೂ. ವರೆಗಿನ ಆದಾಯಕ್ಕೆ ತೆರಿಗೆಯಲ್ಲಿ ಸಂಪೂರ್ಣ ವಿನಾಯಿತಿ ನೀಡಿದ್ದು, ಇದರಿಂದ ಬಹುದೊಡ್ಡ ಪ್ರಮಾಣದಲ್ಲಿ ಮಧ್ಯಮ ವರ್ಗದವರಿಗೆ ಅನುಕೂಲವಾಗಿದೆ.

ರೈತರ ಹಿತಾಸಕ್ತಿ ಕಾಪಾಡುವ ಹಿಂದೆ ಇದ್ದ ಯೋಜನೆಗಳ ಮುಂದುವರಿಕೆ ಹಾಗೂ ಅದರೊಂದಿಗೆ ದೇಶದ 100 ಜಿಲ್ಲೆಗಳಲ್ಲಿ ಕಡಿಮೆ ಇಳುವರಿ ಹೊಂದಿದ ರೈತರ ಸಬಲೀಕರಣಕ್ಕೆ ಯೋಜನೆ ರೂಪಿಸಿ, ರೈತರ ಆದಾಯ ಹೆಚ್ಚಿಸಲು ಎಲ್ಲ ರೀತಿಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ.

MSMC ಗೆ ದೊಡ್ಡ ಕೊಡುಗೆ ನೀಡಿದ್ದು, ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸಲು, ಉದ್ಯೋಗಾವಕಾಶಗಳನ್ನು ಕಲ್ಪಿಸಲು ಯೋಜನೆಗಳನ್ನು ರೂಪಿಸಲಾಗಿದೆ. ಕೈಗಾರಿಕಾ ಉದ್ಯಮಿಗಳಿಗೆ ಹಾಗೂ ಸ್ಟಾರ್ಟ್ ಅಪ್ ಆರಂಭಿಸುವವರಿಗೆ ಉತ್ತೇಜನ ನೀಡಲಾಗಿದೆ.

ಮೋದಿಜಿ ಅವರ ನೇತೃತ್ವದಲ್ಲಿ ಜಾರಿಗೊಂಡ ಮಹತ್ವದ ಯೋಜನೆಗಳಲ್ಲಿ ಒಂದಾದ ಉಡಾನ್ ಯೋಜನೆಗೂ ಹೆಚ್ಚಿನ ಉತ್ತೇಜನ ದೊರೆತಿದ್ದು, ಈ ಹಿಂದೆ ಮೋದಿಜಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಉಡಾನ್ ಯೋಜನೆಯ ಕುರಿತು ಅವರೊಂದಿಗೆ ಚರ್ಚಿಸಲಾಗಿತ್ತು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಇಂದಿನ ಬಜೆಟ್ ನಲ್ಲಿ ಅದನ್ನು ಅಳವಡಿಸಿರುವುದು ಅತ್ಯಂತ ಸಂತಸದ ಸಂಗತಿ. ಉಡಾನ್ ಯೋಜನೆಯಿಂದ ಟೈಯರ್ ಟು ಸಿಟಿಗಳು ಅಭಿವೃದ್ಧಿ ಹೊಂದುತ್ತವೆ.

ಸಂಪೂರ್ಣವಾಗಿ ಕೇಂದ್ರ ಬಜೆಟ್ -2025-26 ಒಂದು ಅಭಿವೃದ್ಧಿಪರ ಮತ್ತು ಜನಸಾಮಾನ್ಯರ ಬಜೆಟ್ ಆಗಿದ್ದು, ಇದರಿಂದ ದೇಶದ ಸರ್ವತೋಮುಖ ಅಭಿವೃದ್ಧಿಯಾಗಲಿದೆ ಎಂದಿದ್ದಾರೆ.

Previous articleಬ್ಯಾಂಕ್‌ ದರೋಡೆ ಪ್ರಕರಣ: ಮತ್ತೊಬ್ಬ ಆರೋಪಿಗೆ ಗುಂಡೇಟು
Next article39ಕ್ಕೆ 5: ಕೃಪಾಂಕ ನಿಗದಿಯಲ್ಲೂ ಅನ್ಯಾಯ