ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಶಾಲೆಗಳಿಗೆ ರಜೆ

0
36

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಗುರುವಾರ ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜೂನ್ 13ರಂದು(ಶುಕ್ರವಾರ) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.
ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯಿಸಲಿದೆ. ಜಿಲ್ಲೆಯಲ್ಲಿ ಗುರುವಾರದಿಂದ ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

Previous article75 ವರ್ಷದಲ್ಲಿ ಕಾಂಗ್ರೆಸ್ ಶೇ. 15ರಷ್ಟೂ ಅಭಿವೃದ್ಧಿ ಕೆಲಸ ಮಾಡಿರಲಿಲ್ಲ
Next articleಕಿಲ್ಲರ್ ಟಿಪ್ಪರ್ ಗೆ ನವವಿವಾಹಿತ ಬಲಿ: ಪತ್ನಿಗೆ ಗಾಯ