ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲು

0
23

ಬೆಂಗಳೂರು: ಬೆಂಗಳೂರಿನಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರೈಲುಗಳಲ್ಲಿ ಪ್ರಯಾಣಿಕರ ಜನಸಂದಣಿಯನ್ನು ತಪ್ಪಿಸಿ, ಅವರ ಸುಗಮ‌ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಆಗಸ್ಟ್‌ ತಿಂಗಳಲ್ಲಿ ಬೆಂಗಳೂರಿನಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ಈ ವಿಶೇಷ ರೈಲುಗಳ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

Previous articleಪಂಚ ಪ್ರಶ್ನೆಗಳಿಗೆ ಈವರೆಗೂ ಉತ್ತರ ಬಂದಿಲ್ಲ…
Next articleಖಾಸಗಿ ಶಾಲಾ ಬಸ್‌ ಡಿಕ್ಕಿ: ಶಿಕ್ಷಕ ಸಾವು