Home ತಾಜಾ ಸುದ್ದಿ ಉತ್ಸವದಲ್ಲಿ ಆನೆ ದಾಳಿ: 20ಕ್ಕೂ ಅಧಿಕ ಮಂದಿಗೆ ಗಾಯ

ಉತ್ಸವದಲ್ಲಿ ಆನೆ ದಾಳಿ: 20ಕ್ಕೂ ಅಧಿಕ ಮಂದಿಗೆ ಗಾಯ

0

ಆನೆ ದಾಳಿಯಲ್ಲಿ ಕನಿಷ್ಠ 20 ಮಂದಿಗೆ ಗಾಯ

ಕೇರಳದ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಸಿಂಗಾರಗೊಂಡು ನಿಂತಿದ್ದ ಆನೆ ಏಕಾಏಕಿ ದಾಳಿ ಮಾಡಿದ ಘಟನೆ ನಡೆದಿದೆ.
ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ಈ ಘಟನೆ ನಡೆದಿದ್ದು. ಆನೆ ದಾಳಿಯಲ್ಲಿ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ, ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿಕೊಂಡ ಆನೆ ಏಕಾಏಕಿ ತಿರುವಾಡಿ ನೆಲಕ್ಕೆ ಒಗೆದಿದೆ. ಘಟನೆಯಿಂದ ಗಾಬರಿಗೊಂಡ ಜನರು ಓಡಲು ಪ್ರಾರಂಭಿಸಿದ್ದಾರೆ. ಇದರಿಂದ ಕಾಲ್ತುಳಿತವಾಗಿ 17 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ತಿರೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾವುತರು ಹರಸಾಹಸಪಟ್ಟು ಆನೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇನ್ನು ಗಾಯಗೊಂಡವರನ್ನು ಕೊಟ್ಟಕಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Exit mobile version