ಉದ್ಯಮವೂ ಇಲ್ಲ, ಉದ್ಯೋಗವೂ …

0
16

ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತದ ನೀತಿ, ನಾವು ರಾಜ್ಯದಲ್ಲಿ ಮೂಡಿಸಿದ್ದ ಉದ್ಯಮಸ್ನೇಹಿ ವಾತಾವರಣದಿಂದ ಇಡೀ ಭಾರತದಲ್ಲೇ ಅತಿ ಹೆಚ್ಚಿನ ವಿದೇಶೀ ಬಂಡವಾಳ ಹೂಡಿಕೆ ನಮ್ಮ ಕರ್ನಾಟಕಕ್ಕೆ ಹರಿದು ಬಂದಿತ್ತು ಎಂದು ರಾಜ್ಯ ಬಿಜೆಪಿ ಹೇಳಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಜಗತ್ತೇ ಕೋವಿಡ್‌ ಮಹಾಮಾರಿಯಿಂದ ತತ್ತರಿಸಿ ಆರ್ಥಿಕವಾಗಿ ಕುಸಿದ ಸಮಯದಲ್ಲೂ ನಮ್ಮ ಆಡಳಿತ ವೈಖರಿಯಿಂದ ಅವೆಲ್ಲವನ್ನೂ ಸವಾಲಾಗಿ ಸ್ವೀಕರಿಸಿ ಎಫ್‌ಡಿಐ ನೀತಿ ಸುಧಾರಣೆಗಳ ಕುರಿತು ನಾವು ಕೈಗೊಂಡ ಕ್ರಮಗಳಿಂದ ಕರ್ನಾಟಕವನ್ನು ಎಫ್‌ಡಿಐ ನಲ್ಲಿ ದೇಶದಲ್ಲಿಯೇ ನಂಬರ್-1 ಸ್ಥಾನಕ್ಕೆ ಏರಿಸಿದ್ದೆವು. ಆದರೆ ಇಂದಿನ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಅಸಮರ್ಥ ಆಡಳಿತದಿಂದ ಉದ್ಯಮಗಳಿಗೆ ಸರಿಯಾದ ಮೂಲಸೌಕರ್ಯ ಕಲ್ಪಿಸದೇ ಹಲವಾರು ಉದ್ಯಮಗಳು ರಾಜ್ಯ ತೊರೆದು ಬೇರೆ ಕಡೆ ಹೋದವು. ಹಾಗೂ ಉದ್ಯಮಿಗಳ ಕುರಿತ ಕಡೆಗಣನೆಯಿಂದ ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಿಕೆ ತಗ್ಗಿದ ಪರಿಣಾಮ ಕರ್ನಾಟಕವು ಇಂದು ಎರಡನೇ ಸ್ಥಾನಕ್ಕೆ ಕುಸಿದಿದೆ ಎಂದಿದ್ದಾರೆ.

Previous articleಚಾರ್ಜ್​ಶೀಟ್​ ಮಾಹಿತಿ ಪ್ರಸಾರ ನಿರ್ಬಂಧ
Next articleವೈದ್ಯರ ಮೇಲೆ ಹಲ್ಲೆ ಖಂಡಿಸಿ ಓಪಿಡಿ ಬಂದ್‌