ಬೆಂಗಳೂರು: ದೆಹಲಿ ಸೇರಿದಂತೆ ದೇಶದ ಪ್ರಮುಖ 45 ಸ್ಥಳಗಳಲ್ಲಿ ಉದ್ಯೋಗ ಮೇಳ ಆರಂಭವಾಗಿದೆ.
ಮೇಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದರು, ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ದೇಶಾದ್ಯಂತ ಆಯ್ಕೆಯಾದವರು, ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಮತ್ತು ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳು/ಇಲಾಖೆಗಳಿಗೆ ಸೇರ್ಪಡೆಯಾಗಿ ಸೇವೆ ಸಲ್ಲಿಸಲಿದ್ದಾರೆ.