ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ದಾಪುಗಾಲು

0
21

ಪ್ರತಿಭಾ ಸಮತೋಲನವನ್ನು ಕಾಯ್ದುಕೊಳ್ಳುವ ವಿಚಾರದಲ್ಲಿಯೂ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ

ಬೆಂಗಳೂರು: ಕಳೆದ ಒಂದು ವರ್ಷದಲ್ಲಿ 1.36 ಲಕ್ಷ ಕಾರ್ಪೊರೇಟ್ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕೌಶಲ್ಯವುಳ್ಳ ಪ್ರತಿಭಾವಂತ ಉದ್ಯೋಗಿಗಳನ್ನು ಒದಗಿಸುವ #xpheno ಸಂಸ್ಥೆಯ ಸಮೀಕ್ಷೆಯೊಂದರ ಪ್ರಕಾರ, ಅತ್ಯುತ್ತಮ ಉದ್ಯೋಗಾವಕಾಶಗಳು ಹಾಗೂ ಆಕರ್ಷಕ ವೇತನಗಳು ಲಭ್ಯವಾಗುತ್ತಿರುವ ದೇಶದ ನಗರಗಳ ಪೈಕಿ ಬೆಂಗಳೂರು ನಗರ ನಂ.1 ಸ್ಥಾನದಲ್ಲಿದೆ. ಈ ಸಮೀಕ್ಷೆಯ ಪ್ರಕಾರ ಸಕಾರಾತ್ಮಕ ಪ್ರತಿಭಾ ಸಮತೋಲನವನ್ನು ಕಾಯ್ದುಕೊಳ್ಳುವ ವಿಚಾರದಲ್ಲಿಯೂ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ. ಸಮೀಕ್ಷಾ ವರದಿಯ ಪ್ರಕಾರ ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ 1.36 ಲಕ್ಷ ಕಾರ್ಪೊರೇಟ್ ಉದ್ಯೋಗಾವಕಾಶಗಳು ಸೃಷ್ಟಿಯಾಗಿದೆ ಎಂದಿದ್ದಾರೆ.

Previous articleಕಲಬುರಗಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಅಪಹರಣವಾಗಿದ್ದ ಶಿಶು ಪತ್ತೆ
Next articleವಕ್ಫ್ ಬೋರ್ಡ್ ಜಮೀನು ವಶಪಡಿಸಿಕೊಳ್ಳಲು ಬಿಡುವುದಿಲ್ಲ