ಉಪಚುನಾವಣೆ ಫಲಿತಾಂಶ: ಗ್ಯಾರಂಟಿ ಮತ್ತು ಅಭಿವೃದ್ಧಿಗೆ ಕೈಗನ್ನಡಿಯಾಗಿದೆ

0
37

ಬೆಂಗಳೂರು: ಈ ಮೂರು ಚುನಾವಣೆ ಫಲಿತಾಂಶ ನಮ್ಮ ಗ್ಯಾರಂಟಿ ಮತ್ತು ಅಭಿವೃದ್ಧಿಗೆ ಕೈಗನ್ನಡಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿ ಗೆಲ್ಲಿಸಿದ್ದಾರೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ‌ ಕೂಡ ಹೇಳಿದ್ದೆ. ಹೆಚ್​ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದ ಸಂಸದರಾಗಿದ್ದಾರೆ. ಇದಲ್ಲದೆ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಅಧಿಕಾರದ ಆಸೆಗೆ ಚನ್ನಪಟ್ಟಣ ಕ್ಷೇತ್ರವನ್ನು ಕೈಬಿಟ್ಟಿದ್ದಕ್ಕೆ ಜನ ಉತ್ತರ ನೀಡಿದ್ದಾರೆ. ಶಿಗ್ಗಾಂವಿಯಲ್ಲಿ ಭರತ್ ಸೋಲು ಅನ್ನೋದು ಹೇಳಲ್ಲ. ಅಲ್ಲಿ ಈ ಹಿಂದೆ ನಮ್ಮ ಅಭ್ಯರ್ಥಿ ಸೋತಿದ್ದರು. ಈಗ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಸಂಡೂರಿನಲ್ಲೂ ನಾವು ಗೆದ್ದಿದ್ದೇವೆ. ಈ ಮೂರು ಚುನಾವಣೆ ನಮ್ಮ ಗ್ಯಾರಂಟಿ ಮತ್ತು ಅಭಿವೃದ್ಧಿಗೆ ಕೈಗನ್ನಡಿಯಾಗಿದೆ ಎಂದರು.

Previous article24ರಂದು ಮುತ್ತುಸ್ವಾಮಿ ದೀಕ್ಷಿತರ ಆರಾಧನಾ ಸಂಗೀತೋತ್ಸವ
Next articleಸರ್ಕಾರದ ಸಂಪನ್ಮೂಲ ಹೇರಳವಾಗಿ ಬಳಕೆಯಾಗಿದೆ