ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಲೋಕಸೇವಾ ಆಯೋಗದ ಅಧ್ಯಕ್ಷರ ಸಮಾವೇಶದಲ್ಲಿ ಭಾಗಿಯಾಗಲಿದ್ದು, ನಂತರ ಮಧ್ಯಾಹ್ ಬಿಇಎಲ್, ಬಿಎಚ್ಇಎಲ್ ಕಾರ್ಖಾನೆಗಳಿಗೆ ಭೇಟಿ ನೀಡಿ ಅಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮಾನ್ಯ ಉಪ ರಾಷ್ಟ್ರಪತಿಗಳಾದ ಜಗದೀಪ್ ಧನ್‌ಕರ್ ಅವರನ್ನು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿಗೆ ಸ್ವಾಗತಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ವೇಳೆ ಹಾಜರಿದ್ದರು.