ಉಪ ಚುನಾವಣೆ: ಖಾದ್ರಿ ಬಂಡಾಯ ಶಮನ!

0
16

ಬೆಂಗಳೂರು: ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಕೊನೆ ಘಳಿಗೆಯಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ವಿರುದ್ಧ ಬಂಡೆದ್ದ ಅಜ್ಜಂಪೀರ್ ಖಾದ್ರಿ ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಶಿಗ್ಗಾಂವ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಜ್ಜಂಪೀರ್ ಖಾದ್ರಿ ಅವರ ಜೊತೆ ಮಾತುಕತೆ ನಡೆಸಿ, ಪಕ್ಷದ ಹಿತದೃಷ್ಟಿಯಿಂದ ನಾಮಪತ್ರ ಹಿಂಪಡೆಯುವಂತೆ ತಿಳಿಸಿದೆ. ಈ ವೇಳೆ ಅವರು ತಮ್ಮ ನಾಮಪತ್ರ ಹಿಂಪಡೆಯುವ ಜೊತೆಗೆ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಕ್ರಿಯವಾಗಿ ಕೆಲಸ ಮಾಡುವುದಾಗಿ ವಾಗ್ದಾನ ನೀಡಿದ್ದಾರೆ ಎಂದಿದ್ದಾರೆ.

Previous articleರಕ್ಷಣಾ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ನೇಮಕ
Next articleಸುಧಾ ಕಾರ್ಸ್ ಮ್ಯೂಸಿಯಂಗೆ ಭೇಟಿ ನೀಡಲಿರುವ ಆನಂದ್ ಮಹೀಂದ್ರಾ