Home News ಎಂ.ಬಿ. ಪಾಟೀಲ್‌ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ: ಸುಧಾಕರ

ಎಂ.ಬಿ. ಪಾಟೀಲ್‌ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ: ಸುಧಾಕರ

ಕಾಂಗ್ರೆಸ್‌ನ ಎಂ.ಬಿ. ಪಾಟೀಲ್‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದರೆ ಕೆಲವರು ಕಾಂಗ್ರೆಸ್‌ ಸೇರುತ್ತಾರೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತ ಮುಖ್ಯಮಂತ್ರಿ ಮಾಡಿ ಅನೇಕ ವರ್ಷಗಳೇ ಕಳೆದು ಹೋಗಿವೆ. ವೀರೇಂದ್ರ ಪಾಟೀಲ್ ಅವರ ಕಾಲದಲ್ಲಿ ಸಿಎಂ ಆಗಿದ್ದು, ಈಗ ಎಂ.ಬಿ. ಪಾಟೀಲ್‌ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲು ರಾಹುಲ್‌ ಗಾಂಧಿ ಅವರಿಗೆ ಹೇಳಿ. ಪಾಟೀಲ್‌ರಿಗೆ ಮುಖ್ಯಮಂತ್ರಿ ಆಗುವ ಅರ್ಹತೆ ಇಲ್ವಾ ಎಂದು ಅವರು ಪ್ರಶ್ನಿಸಿದ್ದಾರೆ.

ಸುಧಾಕರ
Exit mobile version