SK Home Ad
Home ತಾಜಾ ಸುದ್ದಿ ಎಎಪಿ ನಾಯಕ ಸಂಜಯ್ ಸಿಂಗ್‌ಗೆ ಜಾಮೀನು

ಎಎಪಿ ನಾಯಕ ಸಂಜಯ್ ಸಿಂಗ್‌ಗೆ ಜಾಮೀನು

0
104

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನದಲ್ಲಿದ್ದ ಆಪ್ ಸಂಸದ ಸಂಜಯ್‌ ಸಿಂಗ್‌ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.
ಸಂಜಯ್‌ ಸಿಂಗ್‌ ಅವರಿಗೆ ಜಾಮೀನು ಮಂಜೂರು ಮಾಡಲು ಯಾವುದೇ ತಕರಾರು ಇಲ್ಲ ಎಂಬುವುದನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದಿಪಾಂಕರ್ ದತ್ತ ಮತ್ತು ಪಿ.ಬಿ.ವರಾಳೆ ಅವರಿದ್ದ ಪೀಠವು ಸಂಜಯ್ ಸಿಂಗ್‌ಗೆ ಜಾಮೀನು ಮಂಜೂರು ಮಾಡಿತು. ಪ್ರಕರಣದಲ್ಲಿ ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ಜಾಮೀನು ನೀಡಿದರೆ ಅಭ್ಯಂತರವಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.