ಬೆಂಗಳೂರು: ಐಪಿಎಸ್ ಮಹಿಳಾ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2000ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ರೂಪಾ ಅವರನ್ನು ಐಜಿಪಿಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿಯಾಗಿ (ಎಡಿಜಿಪಿ) ಸರ್ಕಾರವು ಮುಂಬಡ್ತಿ ನೀಡಿದೆ. ಮುಂದಿನ ಆದೇಶದವರೆಗೂ ಸದ್ಯ ಕಾರ್ಯನಿರ್ವಹಿಸುತ್ತಿರುವ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದೆ.