ಎಲ್ಲಿಗೆ ಬಂದು ನಿಂತಿದೆ ನಮ್ಮ ಕರ್ನಾಟಕದ ಪರಿಸ್ಥಿತಿ???

0
26

ಬೆಂಗಳೂರು: ಎಲ್ಲಿಗೆ ಬಂದು ನಿಂತಿದೆ ನಮ್ಮ ಕರ್ನಾಟಕದ ಪರಿಸ್ಥಿತಿ??? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಘರ್ಷಣೆ ಉಂಟಾಗಿ, ನಲುಗಿ ಹೋಗಿರುವ ನಾಗಮಂಗಲ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಸರ್ವಜನಾಂಗದ ಶಾಂತಿಯ ತೋಟವನ್ನು ರಾಜ್ಯ ಕಾಂಗ್ರೆಸ್ ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ. ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದಿರುವ ದುಷ್ಕೃತ್ಯ ಅತ್ಯಂತ ಖಂಡನೀಯ. ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು ಎಲ್ಲಿದೆ?? ಗಣೇಶ ಮೂರ್ತಿ ಇದ್ದರೂ ಕಲ್ಲು ತೂರಾಟ ಮಾಡಿ ಬೆಂಕಿ ಹಚ್ಚಿದ್ದಾರೆ. ಗಣೇಶ ಮೂರ್ತಿ ಇದ್ದರೂ ಕಲ್ಲು ಹೊಡೆದು ಬೆಂಕಿ ಹಚ್ಚಿದ್ದಾರೆ. ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ?? ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕು. ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಘಟನೆಗಳು ಆಗುತ್ತಿದೆ. ಈ ಘಟನೆಯ ಸಂಪೂರ್ಣ ಹೊಣೆ ರಾಜ್ಯ ಕಾಂಗ್ರೆಸ್ ಸರ್ಕಾರದ್ದು ಎಂದಿದ್ದಾರೆ.

Previous articleಗಣೇಶ ವಿಸರ್ಜನಾ ಸಂದರ್ಭದಲ್ಲಿ ರಂಪಾಟ
Next articleರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆ