ಎಸ್‌ಎಸ್‌ಎಲ್‌ಸಿ ಫಲಿತಾಂಶ ಫಸ್ಟ್‌ಕ್ಲಾಸ್‌

0
49

ಬೆಂಗಳೂರು: 2025ರ ಮಾರ್ಚ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟಾರೆ ಶೇ. 66.14ರಷ್ಟು ಫಲಿತಾಂಶವಾಗಿದೆ.
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇ. 8ರಷ್ಟು ಫಲಿತಾಂಶ ಹೆಚ್ಚಳವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ ಮತ್ತು ಉತ್ತರ ಕನ್ನಡ ತೃತೀಯ ಸ್ಥಾನ ಪಡೆದಿವೆ. ಶಿವಮೊಗ್ಗ, ಕೊಡಗು ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದಿವೆ. ಧಾರವಾಡ 18ನೇ ಸ್ಥಾನದಲ್ಲಿದ್ದರೆ ಕಲಬುರಗಿ 35ನೇ ಸ್ಥಾನ ಪಡೆದಿದೆ.
ಈ ಬಾರಿ ದಾಖಲೆ 22 ಜನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದ್ದಿದ್ದಾರೆ. ಎಂದಿನಂತೆ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದು ಶೇ. 74ರಷ್ಟು ಫಲಿತಾಂಶ ಸಾಧಿಸಿದ್ದಾರೆ. ಇನ್ನು ಗಂಡು ಮಕ್ಕಳು 58.07 ಪ್ರತಿಶತದಷ್ಟು ಗಂಡು ಮಕ್ಕಳು ಉತ್ತೀರ್ಣರಾಗಿದ್ದಾರೆ.

Previous articleಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ
Next articleSSLC Result: ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳೇ ಬೆಸ್ಟ್‌