ದಾವಣಗೆರೆ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು ವಿದ್ಯಾಕಾಶಿ ದಾವಣಗೆರೆ ಜಿಲ್ಲೆಗೆ 21 ಸ್ಥಾನ ಲಭಿಸಿದ್ದು, ಶೇ.66.09 ಫಲಿತಾಂಶ ಪಡೆದಿದೆ.
ಜಿಲ್ಲೆಯಲ್ಲಿ 19,964 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 13,195 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ 23ನೇ ಸ್ಥಾನಕ್ಕೆ ಕುಸಿದಿದ್ದ ಜಿಲ್ಲೆಯು ಈ ಬಾರಿ 21ನೇ ಸ್ಥಾನ ಪಡೆಯುವಲ್ಲಿ ಮಾತ್ರ ಶಿಕ್ಷಣ ಇಲಾಖೆ ಯಶಸ್ವಿಯಾಗಿದೆ.