ಶಿವಮೊಗ್ಗ: ಕಳೆದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆಗೆ ನಾಲ್ಕನೇ ಸ್ಥಾನ ಲಭ್ಯವಾಗಿದೆ.
೬೨೫ಕ್ಕೆ ೬೨೫ ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಯ ಮೂವರು ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ. ರಾಜ್ಯದ ೨೨ ವಿದ್ಯಾರ್ಥಿಗಳು ೬೨೫ಕ್ಕೆ ೬೨೫ ಅಂಕಗಳನ್ನು ಪಡೆದು ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಅದರಲ್ಲಿ ನಗರದ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನಮನ, ರಾಮಕೃಷ್ಣ ಶಾಲೆಯ ನಿತ್ಯಾ ಎಂ. ಕುಲಕರ್ಣಿ ಹಾಗೂ ಆದಿಚುಂಚನಗಿರಿ ಸಂಯುಕ್ತ ಆಂಗ್ಲಮಾಧ್ಯಮ ಪ್ರೌಢಶಾಲೆಯ ಸಹಿಷ್ಣು ಎನ್. ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.
ಆದಿಚುಂಚನಗಿರಿ ಶಾಲೆಯ ಸಂಜನಾ ಎಸ್., ಸಾಂದೀಪಿನಿ ಶಾಲೆಯ ಹಿತಾ ಎಂ., ಆಚಾರ್ಯ ಪ್ರೌಢಶಾಲೆಯ ಶಶಾಂಕ್ ೬೨೫ಕ್ಕೆ ೬೨೪ ಅಂಕ ಪಡೆದು ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.