ಎ.ಸಿ ಕಚೇರಿ ಸಿಬ್ಬಂದಿ ಆತ್ಮಹತ್ಯೆ

0
19
ಸಾವು

ರಾಯಚೂರು: ಜಿಲ್ಲೆಯ ಎಸಿ ಕಛೇರಿ ಸಿಬ್ಬಂದಿಯೊಬ್ಬರು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಎಸಿಗೆ ಬಳಸುವ ಕುಲೆಂಟ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಎಸ್.ಡಿ.ಎ ವಾಸೀಮ್ ಚೌಧರಿ( 40) ನಗರದ ಜಿಲ್ಲಾಕ್ರೀಡಾಂಗಣ ಆವರಣದಲ್ಲಿನ ಸ್ವಿಮ್ಮಿಂಗ್ ಫೂಲ್ ಬಳಿ ಕುಲೆಂಟ್ ಸೇವನೆ ಮಾಡಿದ್ದ, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 40 ವರ್ಷದ ವಾಸೀಮ್ ಸಾವು. ಕುಲೆಂಟ್ ಸೇವನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Previous articleಮತ್ತೆ ಮೂವರಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ
Next articleಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯ