ಏಕದಿನ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಗ್ಲೆನ್ ಮ್ಯಾಕ್ಸ್‌ವೆಲ್

0
34

ನವದೆಹಲಿ: ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗೆ ತಯಾರಿ ನಡೆಸುವ ಉದ್ದೇಶದಿಂದ ಮ್ಯಾಕ್ಸ್‌ವೆಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದೆ. 2012 ರಿಂದ 2025 ರವರೆಗಿನ ವೃತ್ತಿಜೀವನದಲ್ಲಿ, ಮ್ಯಾಕ್ಸ್‌ವೆಲ್ 149 ಏಕದಿನ ಪಂದ್ಯಗಳಲ್ಲಿ ಆಡಿದ್ದು, 3990 ರನ್‌ಗಳನ್ನು ಗಳಿಸಿದ್ದಾರೆ ಮತ್ತು 77 ವಿಕೆಟ್‌ಗಳನ್ನು ಪಡೆದಿದ್ದಾರೆ. ಸ್ಫೋಟಕ ಬ್ಯಾಟ್ಸ್‌ಮನ್ ಆಗಿರುವ ಮ್ಯಾಕ್ಸ್‌ವೆಲ್ 33.81 ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. 126.70 ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ. 2023 ರ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಅಜೇಯ 201 ರನ್ ಗಳಿಸಿದ್ದು ಮ್ಯಾಕ್ಸ್ವೆಲ್ ಏಕದಿನ ಪಂದ್ಯಗಳಲ್ಲಿ ಆಡಿದ ಶ್ರೇಷ್ಠ ಇನ್ನಿಂಗ್ಸ್ ಎಂದು ಪರಿಗಣಿಸಲಾಗಿದೆ. ಏಕದಿನ ಕ್ರಿಕೆಟ್‌ ನಲ್ಲಿ 4 ಶತಕಗಳು ಮತ್ತು 23 ಅರ್ಧಶತಕಗಳನ್ನು ಅವರು ಗಳಿಸಿದ್ದಾರೆ. ಆಫ್‌ಸ್ಪಿನ್ನರ್ ಆಗಿದ್ದ ಅವರು ತಮ್ಮ ವೃತ್ತಿಜೀವನದಲ್ಲಿ ನಾಲ್ಕು ಬಾರಿ ನಾಲ್ಕು ವಿಕೆಟ್ ಪಡೆದಿದ್ದರು. ಏಕದಿನ ಕ್ರಿಕೆಟ್ ನಲ್ಲಿ 91 ಕ್ಯಾಚ್‌ಗಳನ್ನು ಪಡೆದಿದ್ದಾರೆ.

Previous articleFIR ಅಸ್ತ್ರ ಬಳಸಿ ಶಾಂತಿ ಸ್ಥಾಪನೆಯ ಭ್ರಮೆ ಬೇಡ
Next articleಕೃಷಿ ಸಚಿವರಿಗೆ ಸಿಂಧನೂರು ಬಂದ್ ಯಾವ ಕಾರಣಕ್ಕಾಗಿ ಗೊತ್ತಿದೆಯೇ? ಎಂದು ಪ್ರಶ್ನಿಸಿದ ಆರ್‌ ಅಶೋಕ್‌