Home ತಾಜಾ ಸುದ್ದಿ ಏನು‌ ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ

ಏನು‌ ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ

0

ಬೆಂಗಳೂರು: ನಕ್ಸಲ್ ವಿಕ್ರಂಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಕ್ರಂಗೌಡ ಮೇಲೆ ಕೊಲೆ ಸೇರಿದಂತೆ 60ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ. ಆಟೋಮ್ಯಾಟಿಕ್ ಮಷಿನ್ ಗನ್ ಇಟ್ಟುಕೊಂಡಿದ್ದ. ಈ ಹಿಂದೆ ಶರಣಾಗಾತಿಗಾಗಿ ಪ್ರಯತ್ನಗಳು ನಡೆದಿದ್ದವು. ಅವರ ಸಂಬಂಧಿಕರು ಸಹ ಶರಣಾಗುವಂತೆ ಹೇಳಿದ್ದರು, ವಿಕ್ರಂಗೌಡ ಒಪ್ಪಿರಲಿಲ್ಲ ಎಂದರು.

ಕಾರ್ಕಳದಲ್ಲಿ ಎಎನ್‌ಎಫ್ ಹೆಡ್‌ಕ್ವಾಟರ್ಸ್ ಇದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ಇಟ್ಟುಕೊಂಡು ಬರಲಾಗಿದೆ. ಕಳೆದ ವಾರ ನಕ್ಸಲ್ ಲತಾ ಎಂಬುವರು ಗುರುತಿಸಲಾಗಿತ್ತು. ಕೂಬಿಂಗ್ ನಡೆಸಲಾಗಿತ್ತು. ಅವರನ್ನ ಹಾಗೇ ಬಿಟ್ಟುಕೊಂಡು, ಏನು ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದರು.

ಎನ್‌ಕೌಂಟರ್ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ವ್ಯತ್ಯಾಸವಿಲ್ಲ ಎಂಬ ಕೆಲವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ನಕ್ಸಲ್ ವಿಚಾರದಲ್ಲಿ ಪಕ್ಷದ ಪ್ರಶ್ನೆ ಬರುವುದಿಲ್ಲ. ಜನರ ಸುರಕ್ಷತೆ ಮುಖ್ಯವಾಗುತ್ತದೆ ಎಂದು ಹೇಳಿದರು‌.

Exit mobile version