ಇಡೀ ರಾಜ್ಯದಲ್ಲಿ ಒಂದೇ ದಿನ ದೈಹಿಕ ಪರೀಕ್ಷೆ ನಡೆಸಲು ನಿರ್ಧಾರ
ಬೆಂಗಳೂರು: “ಖಾಲಿ ಇರುವ 3 ಸಾವಿರ ಲೈನ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಬರುವ ಏಪ್ರಿಲ್‌ನೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಯಲಿದೆ. ಮೊದಲ ಬಾರಿಗೆ ಇಡೀ ರಾಜ್ಯದಲ್ಲಿ ಒಂದೇ ದಿನ ದೈಹಿಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಬಳಿಕ ಎಇಇ, ಜೆಇ ಸೇರಿದಂತೆ ಇತರೆ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಈಗಾಗಲೇ ಪವರ್‌ಮನ್ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಬರುವ ಏಪ್ರಿಲ್‌ನೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಯಲಿದೆ. ಮೊದಲ ಬಾರಿಗೆ ಇಡೀ ರಾಜ್ಯದಲ್ಲಿ ಒಂದೇ ದಿನ ದೈಹಿಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಬಳಿಕ ಎಇಇ, ಜೆಇ ಸೇರಿದಂತೆ ಇತರೆ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲಾಗುವುದು’ ಎಂದು ಹೇಳಿದ್ದಾರೆ.