27 ಬಿಲಿಯನ್ ಡಾಲರ್‌ನಿಂದ 100 ಬಿಲಿಯನ್‌ಗೆ ಹೆಚ್ಚಳ
ಬೆಂಗಳೂರು: ಏಪ್ರಿಲ್ ತಿಂಗಳ ಕೊನೆಯಲ್ಲಿ ಎರಡು ದಿನಗಳ ಉತ್ಪಾದನಾ ಮಂಥನ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಕೈಗಾರಿಕೆ, ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಗಣ್ಯ ಉದ್ಯಮಿಗಳು ಹಾಗೂ ಅಧಿಕಾರಿಳೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿದ್ದು ಕರ್ನಾಟಕವನ್ನು ಜಾಗತಿಕ ಮಟ್ಟದ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ ಏಪ್ರಿಲ್ ತಿಂಗಳ ಕೊನೆಯಲ್ಲಿ ನಡೆಸಲು ಉದ್ದೇಶಿಸಿರುವ ಎರಡು ದಿನಗಳ
ಉತ್ಪಾದನಾ ಮಂಥನ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಗಣ್ಯ ಉದ್ಯಮಿಗಳು ಹಾಗೂ ಅಧಿಕಾರಿಳೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಲಾಯಿತು. ರಾಜ್ಯದ ಕೈಗಾರಿಕಾ ವಲಯವು ವಾರ್ಷಿಕವಾಗಿ 27 ಬಿಲಿಯನ್ ಡಾಲರ್ ಮೌಲ್ಯದ ರಫ್ತು ವಹಿವಾಟನ್ನು ನಡೆಸುತ್ತಿದೆ. ಇದನ್ನು 100 ಬಿಲಿಯನ್ ಮಟ್ಟಕ್ಕೆ ಕೊಂಡೊಯ್ಯಬೇಕು. ಇದಕ್ಕಾಗಿ ರಾಜ್ಯ ಮಟ್ಟದಲ್ಲಿ ನೀತಿ ನಿರೂಪಣೆಯಲ್ಲಿ ಆಗಬೇಕಾಗಿರುವ ಕೆಲಸಗಳು, ಕೇಂದ್ರ ಸರಕಾರದ ಮಟ್ಟದಲ್ಲಿ ಆಗಬೇಕಿರುವ ಬದಲಾವಣೆಗಳು ಸೇರಿದಂತೆ ಹಲವು ಪ್ರಮುಖ ವಿಷಯಗಳು ಕುರಿತು ಚರ್ಚಿಸಲಾಯಿತು. ಕೆಲವೇ ದಿನಗಳಲ್ಲಿ ಮತ್ತೊಂದು ಸಭೆ ನಡೆಸಲಾಗುವುದು.
ರಾಜ್ಯದಲ್ಲಿ ಅಪಾರ ನವೋದ್ಯಮಗಳಿದ್ದು, ಹಲವಾರು ಕಂಪನಿಗಳು ₹250 ಕೋಟಿ ವಹಿವಾಟು ನಡೆಸುತ್ತಿವೆ. ಇವುಗಳನ್ನು ಉತ್ಪಾದನಾ ಮಂಥನದ ಭಾಗವಾಗಿಸಲು ಉದ್ದೇಶಿಸಲಾಗಿದೆ. ನೆರೆಹೊರೆಯ ರಾಜ್ಯಗಳ ಉತ್ಪಾದನಾ ಕಂಪನಿಗಳಿಗೂ ಆಹ್ವಾನ ನೀಡಲಾಗುತ್ತಿದ್ದು,ರಾಜ್ಯದಲ್ಲಿ ಬಂಡವಾಳ ಹೂಡಿಕೆ ಪ್ರೇರೇಪಿಸುವ ತಂತ್ರಗಳನ್ನು ಗಂಭೀರವಾಗಿ ಚರ್ಚಿಸಲಾಯಿತು.
ಏಕಸ್ ಕಂಪನಿಯ ಅಧ್ಯಕ್ಷ ಅರವಿಂದ ಮೆಳ್ಳಿಗೇರಿ, ಖ್ಯಾತ ಉದ್ಯಮಿ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ (ವರ್ಚುಯಲ್ ಆಗಿ) ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ತಾಂತ್ರಿಕ ನಿರ್ದೇಶಕ ರಮೇಶ್ ಹಾಗೂ ಇನ್ನಿತರೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
