Home ಕ್ರೀಡೆ ಏಷ್ಯಾಕಪ್​ ಪಂದ್ಯಾವಳಿಗೆ ಭಾರತ ತಂಡ ಪ್ರಕಟ

ಏಷ್ಯಾಕಪ್​ ಪಂದ್ಯಾವಳಿಗೆ ಭಾರತ ತಂಡ ಪ್ರಕಟ

0

ಮುಂಬೈ: ಶ್ರೀಲಂಕಾ ಮತ್ತು ಪಾಕಿಸ್ತಾನ್ ಆತಿಥ್ಯದಲ್ಲಿ ನಡೆಯುತ್ತಿರುವ ೧೬ನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಗೆ ಬಿಸಿಸಿಐ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ.
ಆಗಸ್ಟ್ ೩೦ ರಿಂದ ಸೆಪ್ಟೆಂಬರ್ ೧೭ರ ವರೆಗೆ ನಡೆಯುವ ಏಕದಿನ ಮಾದರಿಯ ಏಷ್ಯಾಕಪ್ ಪಂದ್ಯಾವಳಿಗೆ ೧೭ ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ದೆಹಲಿಯಲ್ಲಿ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ನೇತೃತ್ವದಲ್ಲಿ ನಡೆದ ​​ಸಭೆಯ ನಂತರ ತಂಡವನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ರೋಹಿತ್​ ಶರ್ಮಾ ತಂಡದ ನಾಯಕರಾಗಿದ್ದರೆ, ಉಪನಾಯಕನಾಗಿ ಹಾರ್ದಿಕ್​ ಪಾಂಡ್ಯ ಮುಂದುವರೆದಿದ್ದಾರೆ.
ಗಾಯದ ಸಮಸ್ಯೆಗೆ ಒಳಗಾಗಿದ್ದ ಕೆ.ಎಲ್. ರಾಹುಲ್ ಮತ್ತು ಶ್ರೇಯಸ್ ಅಯ್ಯರ್​ ಸಂಪೂರ್ಣ ಚೇತರಿಸಿಕೊಂಡಿದ್ದು, ಏಷ್ಯಾಕಪ್ ಮೂಲಕ ಟೀಂ ಇಂಡಿಯಾಗೆ ಮರಳಿದ್ದಾರೆ. ಆದರೆ ಆಯ್ಕೆಯ ನಿರೀಕ್ಷೆಯಲ್ಲಿದ್ದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್​ ಮತ್ತು ಯುಜ್ವೇಂದ್ರ ಚಹಲ್ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ. ಸಂಜು ಸ್ಯಾಮ್ಸನ್ ಅವರನ್ನು ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿದೆ.
ಇತ್ತೀಚೆಗಷ್ಟೇ ಪದಾರ್ಪಣೆ ಮಾಡಿದ್ದ ತಿಲಕ್ ವರ್ಮಾ ಅವರಿಗೆ ಅವಕಾಶ ನೀಡಲಾಗಿದೆ. ಕೇವಲ ೭ ಅಂತಾರಾಷ್ಟ್ರೀಯ ಟಿ೨೦ ಪಂದ್ಯಗಳನ್ನು ಆಡಿರುವ ತಿಲಕ್​ ವರ್ಮಾ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಹಿರಿಯ ಆಟಗಾರರಾದ ಶಿಖರ್ ಧವನ್, ಭುವನೇಶ್ವರ್​ ಕುಮಾರ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ(ನಾಯಕ) ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ ಕೃಷ್ಣ, ಮೀಸಲು ಆಟಗಾರ ಸಂಜು ಸ್ಯಾಮ್ಸನ್​

Exit mobile version