ಏ. ೨ರಂದು ಭಕ್ತರ ಸಭೆ ಕರೆದ ದಿಂಗಾಲೇಶ್ವರ ಶ್ರೀ

0
25


ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ ಜೋಶಿ ಬದಲಾವಣೆಗೆ ಕೊಟ್ಟ ಗಡವು ಮುಕ್ತಾಯಗೊಂಡಿದೆ. ಹೀಗಾಗಿ ನಮ್ಮ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಏ.೨ ರಂದು ಧಾರವಾಡದಲ್ಲಿ ಭಕ್ತರ ಸಭೆ ಕರೆದು ನಿರ್ಧಾರ ಪ್ರಕಟಿಸಲಾಗುವುದು ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಮಠಾಧಿಶರು ಯಾವುದೇ ನಿರ್ಧಾರ ಕೈಗೊಳ್ಳಲು ಸ್ವತಂತ್ರರಲ್ಲ. ಈ ನಿಟ್ಟಿನಲ್ಲಿ ನಾಡಿನ ವಿವಿಧ ಮಠಾಧೀಶರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗಿದೆ. ಅಂತೆಯೇ ಏ.೨ ರಂದು ಬೆಳಗ್ಗೆ ೧೦:೩೦ಕ್ಕೆ ಧಾರವಾಡದಲ್ಲಿ ಭಕ್ತರ ಸಭೆ ಕರೆಯಲಾಗಿದೆ. ಭಕ್ತರ ಅಭಿಪ್ರಾಯ ಪಡೆದ ನಂತರ ಮುಂದಿನ ನಡೆಯನ್ನು ತಿಳಿಸಲಾಗುವುದು. ಸಭೆ ನಡೆಯುವ ಸ್ಥಳವನ್ನು ಪ್ರಕಟಣೆಯ ಮೂಲಕ ತಿಳಿಸಲಾಗುವುದು ಎಂದರು.

Previous articleದೆಹಲಿಯಲ್ಲಿ ಇಂಡಿಯಾ ರ‍್ಯಾಲಿ
Next articleಕಾಂಗ್ರೆಸ್‌ನವರು ತೆರಿಗೆ ವಂಚನೆ ಮಾಡಿದರೆ ಪ್ರಶ್ನಿಸಬಾರದೇ