ಬೆಂಗಳೂರು: ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ಫಿಕ್ಸ್ ಆಗಿದೆ.
ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ನಡೆಯಲಿದ್ದು, ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ದರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ. ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಈ ಬಾರಿ ಇತಂಹ ಯಾವುದೇ ಘಟನೆ ನಡೆದಂತೆ ಭದ್ರತೆಯಲ್ಲಿ ನಡೆಸಲು ಆಡಳಿತ ಮಂಡಳಿ ಮುಂದಾಗಿದೆ.