ಐಪಿಎಲ್‌ ಸಂಪೂರ್ಣ ವೇಳಾಪಟ್ಟಿ ಪ್ರಕಟ

0
10

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ದೇಶದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯ ಕಾರಣ ಮಂಡಳಿಯು ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಈ ಹಿಂದೆ ಬಿಡುಗಡೆ ಮಾಡಿತ್ತು.
ಏಪ್ರಿಲ್ 8ರಂದು ಚೆನ್ನೈನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಅನ್ನು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಎದುರಿಸುವುದರೊಂದಿಗೆ ಸ್ಪರ್ಧೆಯು ಪುನರಾರಂಭಗೊಳ್ಳಲು ಸಿದ್ಧವಾಗಿದೆ.
ಪ್ಲೇ ಆಫ್ ಪಂದ್ಯಗಳ ಸ್ಥಳಗಳನ್ನು ಸಹ ಘೋಷಿಸಲಾಗಿದ್ದು, ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮೇ 24 ಕ್ವಾಲಿಫೈಯರ್ 2 ಮತ್ತು 26ರಂದು ಫೈನಲ್‌ ಪಂದ್ಯದ ಆತಿಥ್ಯ ವಹಿಸಿದರೆ, ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಮೇ 21 ಮತ್ತು 22ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

Previous articleಕಾಡಾನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಬಲಿ
Next article`ಲಿಂಗಾಯತರಿಗೆ’ ಟಿಕೆಟ್ ಕೊಡಬೇಕಿತ್ತು