Home ತಾಜಾ ಸುದ್ದಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಬಿಜೆಪಿ ಒತ್ತಾಯ

ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಬಿಜೆಪಿ ಒತ್ತಾಯ

0
ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಬಿಜೆಪಿ ಒತ್ತಾಯ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಮಿಷನರ್ ಹೇಮಂತ್ ನಿಂಬಾಳ್ಕರ್ ಅವರನ್ನು ಈ ಕೂಡಲೇ ಹುದ್ದೆಯಿಂದ ವರ್ಗಾವಣೆ ಮಾಡುವಂತೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಹೇಮಂತ್‌ ನಿಂಬಾಳ್ಕರ್‌ ಅವರು ತಮ್ಮ ಅಧಿಕಾರ ಬಳಸಿಕೊಂಡು ತಮ್ಮ ಪತ್ನಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ಮಾಹಿತಿ ಸಿಕ್ಕಿದೆ.

ಈ ಕಾರಣದಿಂದಾಗಿ ತಕ್ಷಣ ಅವರನ್ನು ವರ್ಗಾವಣೆ ಮಾಡಿ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಲು ಅವಕಾಶ ಮಾಡಿಕೊಡುವಂತೆ ಬಿಜೆಪಿಯ ನಾಯಕರು ಚುನಾವಣಾ ಕಮಿಷನರ್ ಅವರಲ್ಲಿ ಮನವಿ ಮಾಡಿದ್ದಾರೆ.