ಬೆಂಗಳೂರು: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಸಡಿಲಿಗೊಳಿಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕರ್ನಾಟಕ ಶಿಕ್ಷಣ ಇಲಾಖೆಯು ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಅವಕಾಶ ಮಾಡಿಕೊಡಲಾಗಿದೆ, ಆದರೆ ಇದು ಈ ವರ್ಷ ಮಾತ್ರ ಅನ್ವಯ ಆಗಲಿದೆ, ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದ್ದು, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.