Home ತಾಜಾ ಸುದ್ದಿ ಒಂದು ರಾಷ್ಟ್ರ ಒಂದು ಚಂದಾದಾರಿಕೆ ಯೋಜನೆ: ಕೇಂದ್ರದ ಅನುಮೋದನೆ

ಒಂದು ರಾಷ್ಟ್ರ ಒಂದು ಚಂದಾದಾರಿಕೆ ಯೋಜನೆ: ಕೇಂದ್ರದ ಅನುಮೋದನೆ

0

ನವದೆಹಲಿ : ‘ಒಂದು ರಾಷ್ಟ್ರ ಒಂದು ಚಂದಾದಾರಿಕೆ ಯೋಜನೆ’ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಭಾರತೀಯ ಶಿಕ್ಷಣ ಮತ್ತು ಯುವ ಸಬಲೀಕರಣಕ್ಕಾಗಿ ಗೇಮ್ ಚೇಂಜರ್ ಆಗಿದ್ದು ಕ್ಯಾಬಿನೆಟ್ ‘ಒನ್ ನೇಷನ್ ಒನ್ ಚಂದಾದಾರಿಕೆ’ಗೆ ಅನುಮೋದನೆ ನೀಡಿದೆ, ಇದು ಸಂಶೋಧನೆ, ಕಲಿಕೆ ಮತ್ತು ಜ್ಞಾನದ ಕೇಂದ್ರವಾಗಲು ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತದೆ. ಇದು ಅಂತರ ಶಿಸ್ತೀಯ ಅಧ್ಯಯನಕ್ಕೂ ಉತ್ತೇಜನ ನೀಡುತ್ತದೆ ಎಂದಿದ್ದಾರೆ.
ಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು “ಒಂದು ರಾಷ್ಟ್ರ ಒಂದು ಚಂದಾದಾರಿಕೆ” ಯೋಜನೆಗೆ ಸೋಮವಾರ ಅನುಮೋದನೆ ನೀಡಿದೆ. ಇದು ವಿದ್ವತ್ಪೂರ್ಣ ಸಂಶೋಧನಾ ಲೇಖನಗಳು ಮತ್ತು ಜರ್ನಲ್ ಪ್ರಕಟಣೆಗಳಿಗೆ ರಾಷ್ಟ್ರವ್ಯಾಪಿ ಪ್ರವೇಶವನ್ನು ಒದಗಿಸುವ ಗುರಿಯನ್ನು ಹೊಂದಿರುವ ಕೇಂದ್ರ ವಲಯದ ಯೋಜನೆಯಾಗಿದೆ. ಈ ಯೋಜನೆಯು ಸಂಪೂರ್ಣ ಡಿಜಿಟಲ್ ಮತ್ತು ಬಳಕೆದಾರ ಸ್ನೇಹಿ ಪ್ರಕ್ರಿಯೆಯನ್ನು ಬಳಸಿಕೊಳ್ಳುತ್ತದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದರು, ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಕೇಂದ್ರ ಸರ್ಕಾರದ ಆರ್ & ಡಿ ಪ್ರಯೋಗಾಲಯಗಳಿಗೆ ಸುಲಭ ಪ್ರವೇಶವನ್ನು ಖಚಿತಪಡಿಸುತ್ತದೆ. ಈ ಉಪಕ್ರಮವು ದೇಶಾದ್ಯಂತ ಶೈಕ್ಷಣಿಕ ಸಂಪನ್ಮೂಲಗಳಿಗೆ ಪ್ರವೇಶವನ್ನು ಸುವ್ಯವಸ್ಥಿತಗೊಳಿಸುವ ಮೂಲಕ ಸಂಶೋಧನೆ ಮತ್ತು ನಾವೀನ್ಯತೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

Exit mobile version