‘ಒಂದು ರಾಷ್ಟ್ರ, ಒಂದು ಚುನಾವಣೆ’: ರಾಷ್ಟ್ರಪತಿಗೆ ವರದಿ ಸಲ್ಲಿಕೆ

0
6

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆಯ ಸಮೀಕ್ಷೆ ಕುರಿತು ತನ್ನ ವರದಿಯನ್ನು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತು.
191 ದಿನಗಳ ಕಾಲ ವಿವಿಧ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆ ಸಂಗ್ರಹ ಸಂಗ್ರಹಿಸಿದ ಸಂಪೂರ್ಣ ಸಂಶೋಧನೆಯ ಬಳಿಕ ಸುಮಾರು 18,626 ಪುಟಗಳ ಸುದೀರ್ಘ ವರದಿಯನ್ನು ಸಿದ್ಧಪಡಿಸಿದ ವರದಿಯನ್ನು ಸಲ್ಲಿಸಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣಾ ಮತದಾನ ನಡೆಸುವುದಾಗಿದೆ. ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಇದೆ.

Previous article18 OTT ಪ್ಲಾಟ್‌ಫಾರ್ಮ್‌ಗಳಿಗೆ ನಿರ್ಬಂಧ
Next articleನೂತನ ಚುನಾವಣಾ ಆಯುಕ್ತರ ನೇಮಕ