ಒಂದು ರಾಷ್ಟ್ರ ಒಂದು ಚುನಾವಣೆ: ಕೇಂದ್ರ ಸಚಿವ ಸಂಪುಟ ಅಸ್ತು

0
43

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದ್ದು, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರವು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆ ಮೇಲೆ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ್ದರು. ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಚುನಾವಣೆ ಪ್ರಣಾಳಿಕೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಎಂಬುದನ್ನೂ ಪ್ರಮುಖ ಭರವಸೆಯಾಗಿ ಸೇರಿಸಲಾಗಿತ್ತು. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ 100 ದಿನಗಳನ್ನು ಪೂರೈಸಿದ್ದು, ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ರಾಮನಾಥ್​ ಕೋವಿಂದ್ ಸಮಿತಿ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

Previous articleಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ: ಯುವಕ ವಶಕ್ಕೆ
Next articleಒಂದು ರಾಷ್ಟ್ರ ಒಂದು ಚುನಾವಣೆ: ಗಮನ ಬೇರೆಡೆ ಸೆಳೆಯಲು ಬಿಜೆಪಿ ತಂತ್ರ