ಒಂದು ರಾಷ್ಟ್ರ ಒಂದು ಚುನಾವಣೆ ವಿಧೇಯಕ ಮಂಡನೆ

0
30

ನವದೆಹಲಿ: ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಧೇಯಕ ಲೋಕಸಭೆಯಲ್ಲಿ ಇಂದು ಮಂಡನೆ ಆಗಿದೆ.
ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುಮತಿ ನೀಡುವ ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ (ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ-2024 ಜಾರಿಗೆ ತರುವ ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ಮಂಡಿಸಿದರು.

ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ

Previous articleಪ್ಯಾಲೆಸ್ತೀನ್ ನಂತರ ಬಾಂಗ್ಲಾದೇಶ ಬ್ಯಾಗ್‌ನೊಂದಿಗೆ ಪ್ರಿಯಾಂಕಾ ಗಾಂಧಿ
Next articleರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ಕೈ ಜೋಡಿಸಿದ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ