Home ತಾಜಾ ಸುದ್ದಿ ಒಂದು ರಾಷ್ಟ್ರ ಒಂದು ಚುನಾವಣೆ ವಿಧೇಯಕ ಮಂಡನೆ

ಒಂದು ರಾಷ್ಟ್ರ ಒಂದು ಚುನಾವಣೆ ವಿಧೇಯಕ ಮಂಡನೆ

0

ನವದೆಹಲಿ: ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಧೇಯಕ ಲೋಕಸಭೆಯಲ್ಲಿ ಇಂದು ಮಂಡನೆ ಆಗಿದೆ.
ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುಮತಿ ನೀಡುವ ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ (ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ-2024 ಜಾರಿಗೆ ತರುವ ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ಮಂಡಿಸಿದರು.

ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ

Exit mobile version