Home ಅಪರಾಧ ಒಂದೇ ಕುಟುಂಬದ ನಾಲ್ವರು ಸಾವು: ಆತ್ಮಹತ್ಯೆ ಶಂಕೆ

ಒಂದೇ ಕುಟುಂಬದ ನಾಲ್ವರು ಸಾವು: ಆತ್ಮಹತ್ಯೆ ಶಂಕೆ

0

ಪತ್ನಿ, ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ

ಮೈಸೂರು: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾದ ಘಟನೆ ನಡೆದಿದೆ.
ಇಲ್ಲಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್​ನಲ್ಲಿ ಇಂದು ಚೇತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತನ್ನ ತಾಯಿ, ಪತ್ನಿ ಮತ್ತು ಮಗನಿಗೆ ವಿಷ ಉಣಿಸಿದ ಬಳಿಕ ಚೇತನ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಚೇತನ (45), ಇವರ ಪತ್ನಿ ರೂಪಾಲಿ (43), ತಾಯಿ ಪ್ರಿಯಂವಧ (62) ಮತ್ತು ಮಗ ಕುಶಾಲ್ (15) ಮೃತಪಟ್ವವರೆಂದು ತಿಳಿದು ಬಂದಿದೆ. ಚೇತನ್ ಮೂಲತಃ ಹಾಸನ ಜಿಲ್ಲೆಯವರು. ಬೇರೆ ರಾಷ್ಟ್ರದಲ್ಲಿ ಕೆಲಸ ಮಾಡಲು ಇವರು ಕೆಲಸಗಾರರನ್ನು ನೇಮಕ ಮಾಡಿ ಕಳುಹಿಸುತ್ತಿದ್ದರು. ಸಾಲ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಆದರೆ ನಿಖರ ಕಾರಣ ಗೊತ್ತಾಗಿಲ್ಲ. ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್​ಪೆಕ್ಟರ್​ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version