ಶಿವಮೊಗ್ಗ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ನಗರದ ಕ್ಲಾರ್ಕ್ ಪೇಟೆಯಲ್ಲಿ ಈ ಘಟನೆ ನಡೆದಿದ್ದು. ಮೃತರನ್ನು ಭುವನೇಶ್ವರಿ, ಮೋಹನ್, ದರ್ಶನ್ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆಯೇ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು. ಇಂದು ಮನೆಯ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿದ್ದಾರೆ. ಕುಟುಂಬದ ಮೂವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮನೆಯ ಕಡೆಯಿಂದ ಯಾವುದೇ ಸಂಪರ್ಕ ಸಾಧ್ಯವಾಗದ ಹಿನ್ನೆಲೆಯಲ್ಲಿ ಸಂಬಂಧಿಕರೊಬ್ಬರು ಮನೆಯ ಬಳಿಗೆ ವಿಚಾರಿಸಲು ಬಂದ ವೇಳೆ ಮೂವರು ಸಾವನ್ನಪ್ಪಿರುವ ವಿಷಯ ಬಹಿರಂಗವಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.