ಮಂಗಳಾಪುರಂ ಫಸ್ಟ್‌ಲುಕ್ ಅನಾವರಣ
ಕನ್ನಡ ಸೇರಿದಂತೆ ಪರಭಾಷೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ ನಟ ರಿಷಿ. ಇದೀಗ ಮಂಗಳೂರು ಮೂಲದ ತಂಡದ ಜೊತೆಗೆ ಕನ್ನಡದ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಹಿಂದೆ ತುಳು ಚಿತ್ರರಂಗದಲ್ಲಿ ಉಮಿಲ್ ಹಾಗೂ ದೊಂಬರಾಟ ಸಿನಿಮಾ ಮಾಡಿ ಯಶಸ್ಸು ಕಂಡಿರುವ ರಂಜಿತ್ ರಾಜ್ ಸುವರ್ಣ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ರಿಷಿ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ಮಂಗಳಾಪುರಂ ಎಂದು ನಾಮಕರಣ ಮಾಡಿದ್ದು, ಸದ್ಯ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದೆ ಚಿತ್ರತಂಡ. ರಿಷಿ ಜೊತೆಯಲ್ಲಿ ಕಾಶೀನಾಥ್ ಪುತ್ರ ಅಭಿಮನ್ಯು ಸಹ ನಟಿಸುತ್ತಿದ್ದಾರೆ.
‘ಈ ಸಿನಿಮಾ ಒಂದು ಊರಿನಲ್ಲಿ ನಡೆಯುವ ಮರ್ಡರ್ ಮಿಸ್ಟ್ರಿ ಸ್ಟೋರಿ. ನಂಬಿಕೆ, ಮೂಡನಂಬಿಕೆ ಹಾಗೂ ಪವಾಡ ವಿಚಾರದ ಮೇಲೆ ಕಥೆ ಸಾಗಲಿದೆ’ ಎಂದು ಮಾಹಿತಿ ನೀಡುತ್ತಾರೆ ನಿರ್ದೇಶಕ ರಂಜಿತ್. ಈ ಸಿನಿಮಾಗೆ ವಿದ್ವಾನ್ ಪ್ರಸನ್ನ ತಂತ್ರಿ ಮೂಡುಬಿದ್ರೆ ಹಾಗೂ ರಾಮ್ ಪ್ರಸಾದ್ ಬಂಡವಾಳ ಹಾಕಿದ್ದಾರೆ.
ಕಾರ್ಕಳ, ತೀರ್ಥಹಳ್ಳಿ, ಮಡಿಕೇರಿ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.