Home ತಾಜಾ ಸುದ್ದಿ ಒಮ್ಮೆ ಹೇಳಿ ನೋಡೋಣ…: ಕುರ್ಚಿಯ expiry date ಮುಗಿಯುತ್ತದೆ

ಒಮ್ಮೆ ಹೇಳಿ ನೋಡೋಣ…: ಕುರ್ಚಿಯ expiry date ಮುಗಿಯುತ್ತದೆ

0

ಬೆಂಗಳೂರು: “ನಾನೇ ಐದು ವರ್ಷ ಮುಖ್ಯಮಂತ್ರಿ” ಎಂದು ಒಮ್ಮೆ ಹೇಳಿ ನೋಡೋಣ ಎಂದು ವಿಪಕ್ಷ ನಾಯಕ ಆರ್ ಅಶೋಕ, ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
ಸಿದ್ದರಾಮಯ್ಯ ಅವರು ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ನೀವೊಬ್ಬ ವೀಕ್ ಪಿಎಂ ಎಂಬ ಪೋಸ್ಟ್‌ಗೆ ಪ್ರತಿಕ್ರಿಯಿಸಿ ಅಶೋಕ ಪೋಸ್ಟ್‌ ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯನವರೇ, ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ತಾವು.
ಹರಿಪ್ರಸಾದ್ ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರ ತಾವು.
ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು.
ಪ್ರಧಾನಿ ಮೋದಿ ಅವರೇ ಮತ್ತೊಮ್ಮೆ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ. ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, “ನಾನೇ ಐದು ವರ್ಷ ಮುಖ್ಯಮಂತ್ರಿ” ಎಂದು ಒಮ್ಮೆ ಹೇಳಿ ನೋಡೋಣ. ನಿಮಗೆ ಖಂಡಿತ ಹೇಳಲು ಆಗಲ್ಲ. ಅದಕ್ಕೆ ತಮ್ಮನ್ನು ಈ ರಾಜ್ಯ ಕಂಡ ಅತ್ಯಂತ ವೀಕ್ ಮುಖ್ಯಮಂತ್ರಿ ಎಂದು ಜನ ಮಾತಾಡಿಕೊಳ್ಳುವುದು ಎಂದಿದ್ದಾರೆ.

Exit mobile version