ರಾಜ್ಯದಲ್ಲಿ ಸರ್ಕಾರ ಬದುಕಿದೆಯಾ? ಕಾನೂನು ಸುವ್ಯವಸ್ಥೆ ಸರಿ ಇದೆಯಾ?
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಒಲೈಕೆಯ ಕಾರಣದಿಂದ ಇಂದು ರಾಜ್ಯಕ್ಕೆ ಬೆಂಕಿ ಬೀಳುತ್ತಿದೆ ಎಂದು ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಸರ್ಕಾರ ಬದುಕಿದೆಯಾ? ಕಾನೂನು ಸುವ್ಯವಸ್ಥೆ ಸರಿ ಇದೆಯಾ? ಎಂಬ ಪ್ರಶ್ನೆ ಎಲ್ಲರಲ್ಲಿ ಮೂಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕೆಜೆ ಹಳ್ಳಿ – ಡಿಜೆ ಹಳ್ಳಿ ಗಲಭೆ, ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದ ಆರೋಪಿಗಳ ಪ್ರಕರಣವನ್ನೇ ವಾಪಸ್ ಪಡೆದುಕೊಂಡಿದ್ದಾರೆ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರ ಪ್ರಕರಣವನ್ನೇ ಕೈ ಬಿಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಒಲೈಕೆಯ ಕಾರಣದಿಂದ ಇಂದು ರಾಜ್ಯಕ್ಕೆ ಬೆಂಕಿ ಬೀಳುತ್ತಿದೆ. ರಾಜ್ಯದ ಜನರ ನೆಮ್ಮದಿ ಹಾಳಾಗಿದೆ ಎಂದರು.