ದಾಳಿ ವೇಳೆ 10 ಮಂದಿಯಿಂದ ಒಟ್ಟು 10 ಕಂಟ್ರಿ ಪಿಸ್ತೂಲ್ ಹಾಗೂ 24 ಸಜೀವ ಗುಂಡು ವಶ
ವಿಜಯಪುರ: ಅಕ್ರಮವಾಗಿ ಪಿಸ್ತೂಲ್‌ಗಳನ್ನು ಹೊಂದಿದ್ದವರ ಮೇಲೆ ದಾಳಿ ಮಾಡಿದ ಪೊಲೀಸರು ಒಟ್ಟು 10 ಕಂಟ್ರಿ ಪಿಸ್ತೂಲ್ಗಳು ಹಾಗೂ 24 ಸಜೀವ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಮಧ್ಯಪ್ರದೇಶದಿಂದ ಕಂಟ್ರಿ ಪಿಸ್ತೂಲ್‌ಗಳನ್ನು ಅಕ್ರಮವಾಗಿ ತಂದು ಜಿಲ್ಲೆಯ ಹಲವು ವ್ಯಕ್ತಿಗಳಿಗೆ ಮಾರಾಟ ಮಾಡಿರುವುದು ತಿಳಿದುಬಂದಿದ್ದು, ಪಿಸ್ತೂಲ್ ಹೊಂದಿದ್ದ 10 ಮಂದಿಯನ್ನೂ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ. ಇತ್ತೀಚೆಗೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಅರಕೇರಿಯಲ್ಲಿ ನಡೆದಿದ್ದ ಸತೀಶ ಪ್ರೇಮಸಿಂಗ ರಾಠೋಡ ಕೊಲೆ ಪ್ರಕರಣದ ತನಿಖೆಯಲ್ಲಿ ಪಿಸ್ತೂಲ್ ಪೂರೈಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಯಲಾಗಿತ್ತು. ಕೊಲೆ ಪ್ರಕರಣದ ಪ್ರಮುಖ ಆರೋಪಿ ರಮೇಶ್ ಗೇಮು ಲಮಾಣಿಗೆ ಇನ್ನೋರ್ವ ಆರೋಪಿ ಸುರೇಶ್ ರಾಠೋಡ ಎನ್ನುವಾತ ಪಿಸ್ತೂಲ್ ಪೂರೈಸಿದ್ದನು. ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ವಿಜಯಪುರ ಜಿಲ್ಲೆಯ ಹಲವಾರು ಜನರಿಗೆ ಅಕ್ರಮ ಪಿಸ್ತೂಲ್ ಪೂರೈಸಿರುವುದಾಗಿ ಒಪ್ಪಿಕೊಂಡಿದ್ದ. ಆ ಮಾಹಿತಿಯನ್ನು ಆಧರಿಸಿ ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈನಿಂದ ಅಕ್ರಮವಾಗಿ ಪಿಸ್ತೂಲ್‌ಗಳನ್ನು ಪಡೆದವರು ಮೇಲೆ ದಾಳಿ ಮಾಡಲಾಯಿತು. ದಾಳಿ ವೇಳೆ 10 ಮಂದಿಯಿಂದ ಒಟ್ಟು 10 ಕಂಟ್ರಿ ಪಿಸ್ತೂಲ್ಗಳು ಹಾಗೂ 24 ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಹೇಳಿದರು.