ಬೆಂಗಳೂರು: ಕಂಡವರ ಮಕ್ಕಳನ್ನು ಬೆಳೆಸಿದವರು ದೇವರಾದರು ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ನಿನ್ನೆ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ್ ಅರಸ್ ದೇವರಾದರು. ಆದರೆ ಸಿದ್ದರಾಮಯ್ಯನವರು, ಯಡಿಯೂರಪ್ಪನವರು, ಖರ್ಗೆ ಕುಮಾರಣ್ಣ ಎಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆಯಾದರೆ ಕಂಡವರ ಮಕ್ಕಳನ್ನು ಬೆಳೆಸುವವರಾರು?! ಎಂದು ಪ್ರಶ್ನಿಸಿದ್ದಾರೆ.