ಹುಬ್ಬಳ್ಳಿ: ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬು ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದ ಸ್ಥಳಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಇಂದು ಧಾರವಾಡದ ಪ್ರವಾಸದಲ್ಲಿದ್ದ ಸಚಿವರು ಧಾರವಾಡದಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಕಟ್ಟಡ ಕುಸಿತ ಪ್ರಕರಣದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಮೂವರನ್ನು ರಕ್ಷಿಸಲಾಗಿದೆ.