ಯಾದಗಿರಿ: ಜಿಲ್ಲೆಯ ಕಡೆಚೂರು-ಬಾಡಿಯಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರೈಲ್ವೆ ಭೋಗಿ ಕಾರ್ಖಾನೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಭೇಟಿ ನೀಡಿ ಪರಿಶೀಲಿಸಿದರು. ಕಾರ್ಖಾನೆಯ ತಾಂತ್ರಿಕ ಮಾಹಿತಿಯನ್ನು ಪಡೆದುಕೊಂಡು ಅಧಿಕಾರಿಗಳಿಗೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ಅಲ್ಲದೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ತಾಂತ್ರಿಕ ಸಿಬ್ಬಂದಿ ಸೇರಿದಂತೆ ಗ್ರೂಪ್ ವೈಸ್ ನೌಕರರ ಮಾಹಿತಿಯನ್ನು ಪಡೆದುಕೊಂಡರು.