Home ನಮ್ಮ ಜಿಲ್ಲೆ ಉಡುಪಿ ಕತ್ತು ಸೀಳಿ ಸ್ನೇಹಿತನ ಹತ್ಯೆ

ಕತ್ತು ಸೀಳಿ ಸ್ನೇಹಿತನ ಹತ್ಯೆ

0

ಉಡುಪಿ: ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಕಾಂಪ್ಲೆಕ್ಸ್ ಒಂದರಲ್ಲಿ ಸ್ನೇಹಿತನನ್ನೇ ಚೂರಿಯಿಂದ ಇರಿದು ಹಾಡುಹಾಗಲೇ ಹತ್ಯೆಗೈದ ಘಟನೆ ನಡೆದಿದೆ.
ಉಡುಪಿ ಹಳೆ ಕೆಎಸ್ಆರ್‌ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪುಶಾಂತ್ ಶೆಟ್ಟಿ, 32 ಕೊಲೆಯಾದ ವ್ಯಕ್ತಿ, ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಯ ಯಾನ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ, ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್‌ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕೃತ್ಯ ಎಸಗಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಸಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Exit mobile version