ಹುಬ್ಬಳ್ಳಿ: ಹುಬ್ಬಳ್ಳಿಯ ವಿಜಯನಗರದಲ್ಲಿ 5 ವರ್ಷದ ಬಾಲಕಿಯನ್ನು ಕತ್ತು ಹಿಚುಕಿ ಕೊಲೆ ಮಾಡಿದ ಘಟನೆ ವಿಜಯನಗರದಲ್ಲಿ ನಡೆದಿದೆ.
ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯನಗರದಲ್ಲಿ ಘಟನೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.
ವಿಜಯನಗರದ ಆದ್ಯಾಸಾಯಿ ಕೊಲೆಯಾದ ಬಾಲಕಿ. ಮೃತಪಟ್ಟ ಬಾಲಕಿ ಮನೆ ಮುಂದೆ ಆಡುತ್ತಿದ್ದಾಗ ಅಪರಿಚಿತ ವ್ಯಕ್ತಿ ಬಂದು ಮಗುವನ್ನು ಎತ್ತಿಕೊಂಡು ಹೋಗಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕರೆದೋಯ್ದು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಅಶೋಕ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಮಗುವಿನ ಶವವನ್ನು ಹುಬ್ಬಳ್ಳಿಯ ಕಿಮ್ಸ್ ಶವಾಗರಕ್ಕೆ ರವಾನೆ ಮಾಡಿದ್ದಾರೆ. ಕಿಮ್ಸ್ ಆಸ್ಪತ್ರೆಗೆ ಡಿಸಿಪಿ ರವೀಶ್, ಎಸಿಪಿ ಶಿವಪ್ರಸಾದ ಭೇಟಿ ನೀಡಿ ಶವ ಪರಿಶೀಲನೆ ಮಾಡಿದ್ದಾರೆ.