ಬೆಂಗಳೂರು: ಲೋಕೋ ಪೈಲಟ್ ಮುಂಬಡ್ತಿ ಪರೀಕ್ಷೆ ಕನ್ನಡದಲ್ಲಿ ನಡೆಸಲು ನೈಋತ್ಯ ರೈಲ್ವೆ ಅಧಿಸೂಚನೆ ಹೊರಡಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಅಧಿಸೂಚನೆಯನ್ನು ಹಂಚಿಕೊಂಡಿದ್ದಾರೆ. ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿರುವ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ಕೇಂದ್ರ ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದ್ದು, ನನ್ನ ಸೂಚನೆಯ ಮೇರೆಗೆ ಸಹಾಯಕ ಲೋಕೋ ಪೈಲಟ್ ಮುಂಬಡ್ತಿ (Promotional) ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ನೈಋತ್ಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ಈ ನಿರ್ಧಾರದಿಂದ ಪ್ರತಿಭಾವಂತ ಕನ್ನಡಿಗ ಉದ್ಯೋಗಿಗಳಿಗೆ ರೈಲ್ವೆಯಲ್ಲಿ ಮತ್ತಷ್ಟು ಹೆಚ್ಚಿನ ಅವಕಾಶಗಳು ದೊರಕಲಿವೆ ಎಂಬ ಭರವಸೆಯಿದೆ ಎಂದಿದ್ದಾರೆ.