ಕನ್ನಡ ನಾಮಫಲಕ ತೆರವು: ಕರವೇ ಕಾರ್ಯಕರ್ತರಿಗೆ ನ್ಯಾಯಾಂಗ ಬಂಧನ

0
18

ಬೆಂಗಳೂರು: ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಬಂಧಿಸಲಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳಿಗೆ ಆಗ್ರಹಿಸಿ ನಡೆಸಲಾದ ಚಳವಳಿಗೆ ಸಂಬಂಧಿಸಿ ಬಂಧಿತರಾದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಜನರನ್ನು ದೇವನಹಳ್ಳಿಯಲ್ಲಿ ನ್ಯಾಯಾಧೀಶರ ಮುಂದೆ ಇಂದು ಬೆಳಗ್ಗೆ ಹಾಜರುಪಡಿಸಲಾಗಿತ್ತು. ನಾರಾಯಣಗೌಡರು ಸೇರಿದಂತೆ ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು ಎಲ್ಲಾ ಬಂಧಿತರನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನೂ ನೂರು ಬಾರಿ ಜೈಲಿಗೆ ಕಳುಹಿಸಿದರೂ ನಾವು ಹೆದರಲ್ಲ ಎಂದು ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ನಮ್ಮ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಇನ್ನೂ 100 ಕೇಸ್​ ಹಾಕಿದರೂ ಹೋರಾಟ ಹತ್ತಿಕ್ಕಲು ಆಗಲ್ಲ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಾನು ಪ್ರವಾಸ ಮಾಡುತ್ತೇನೆ. ಕನ್ನಡ ಇಲ್ಲದ ನಾಮಫಲಕ ಕಿತ್ತೊಗೆಯುತ್ತೇವೆ. ನಮ್ಮ ನಾಡಿನ ಇತಿಹಾಸಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಪೊಲೀಸರ ಮೇಲೆ ನಾವು ಹಲ್ಲೆ ಮಾಡಿದ್ದೇವೆ ಅನ್ನೋದು ಸುಳ್ಳು. ಪೊಲೀಸರ ಮೇಲೆ ಹಲ್ಲೆ ಮಾಡಿದ್ದನ್ನು ತೋರಿಸಿ. ನಮ್ಮ ಪೊಲೀಸರ ಮೇಲೆ ನಮಗೆ ಗೌರವ ಹಾಗೂ ಕಳಕಳಿ ಇದೆ. ಸಿದ್ದರಾಮಯ್ಯ ಕನ್ನಡಪ್ರೇಮಿ ಎಂದು ಅವರಿಗೆ ಬೆಂಬಲ ನೀಡಿದ್ದೆವು ಎಂದು ಆಕ್ರೋಶ ಹೊರ ಹಾಕಿದ್ದಾರೆ.

Previous articleಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿಯುವ ಸಂಭ್ರಮ
Next articleಕನ್ನಡ ಬೋರ್ಡ್‌ಗಳನ್ನು ಪ್ರದರ್ಶಿಸಲು ಏಕೆ ಬಯಸುವುದಿಲ್ಲ?