ಕಪೋಲ ಕಲ್ಪಿತ ಆರೋಪ ಮಾಡಿ ವಿಷಯಾಂತರ…

0
18

ಬೆಂಗಳೂರು: ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎನ್ನುವುದು ಗಾದೆ ಮಾತು, ಆದರೆ ನೀವು ಹಾಗೂ ನಿಮ್ಮ ಮುಖ್ಯಮಂತ್ರಿಗಳ ಮೈಯೆಲ್ಲಾ ಭ್ರಷ್ಟತೆಯ ಹುಣ್ಣು ತುಂಬಿಕೊಂಡು ನಾರುತ್ತಿದೆ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಒಂದರ ಮೇಲೊಂದು ತನಿಖೆಗಳು ನಡೆಯುತ್ತಲೇ ಇವೆ, ಕರ್ನಾಟಕದ ಇತಿಹಾಸದಲ್ಲಿ ಅನೈತಿಕತೆಯನ್ನು ಕತ್ತಿಗೆ ಕಟ್ಟಿಕೊಂಡು ಸರ್ಕಾರ ನಡೆಸುತ್ತಿರುವ ಇತಿಹಾಸ ನಿರ್ಮಿಸಿದ ದಾಖಲೆ ನಿಮಗೆ ಹಾಗೂ ನಿಮ್ಮ ಮುಖ್ಯಮಂತ್ರಿಗೇ ಸಲ್ಲುತ್ತದೆ.

ನೀವು ನಡೆಸಿದ ಕಡು ಭ್ರಷ್ಟ ಹಗರಣಗಳಿಗೆ ಕನಸು ಮನಸ್ಸಿನಲ್ಲೂ ಎಣಿಸದ ರೀತಿಯಲ್ಲಿ ತನಿಖೆಗಳು ನಿಮ್ಮ ಕೊರಳು ಸುತ್ತಿ ಕೊಳ್ಳುತ್ತಿವೆ ಇದರಿಂದ ತೀವ್ರ ಹತಾಶಗೊಂಡಿರುವ ನೀವು ನಮ್ಮ ತಾಯಿಯವರ ಆಕಸ್ಮಿಕ ಸಾವಿನ ವಿಚಾರಗಳನ್ನು ಮುಂದೆ ತಂದು ಮಾತನಾಡುತ್ತಿರುವುದು ನಿಮ್ಮ ಅಸಭ್ಯ ಹಾಗೂ ಸಂಸ್ಕೃತಿ ಹೀನ ನಡವಳಿಕೆಯನ್ನು ಪ್ರತಿಬಿಂಬಿಸುತ್ತಿದೆ.

ಮಾನ್ಯ ಶೋಭಾ ಕರಂದ್ಲಾಜೆ ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲಾಗದ ನೀವು ಹೇಡಿಯಂತೆ ಕಪೋಲ ಕಲ್ಪಿತ ಆರೋಪಗಳನ್ನು ಮಾಡಿ ವಿಷಯಾಂತರ ಮಾಡಲು ಹೊರಟಿರುವ ನಿಮ್ಮ ನಡೆ “ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಗುಣವ ಬಿಡು ನಾಲಿಗೆ” ಎಂಬ ದಾಸರ ಪದವನ್ನು ನಿಮಗೆ ನೆನಪಿಸಿ ಹೇಳಬೇಕಾಗಿದೆ. ಮಾಡಿದ್ದುಣ್ಣೋ ಮಹರಾಯ ಎಂಬ ಮಾತಿನಂತೆ ಅತೀ ಶೀಘ್ರದಲ್ಲೇ ನಿಮ್ಮ ಹಾದಿ ಕೃಷ್ಣನ ಜನ್ಮಸ್ಥಾನದತ್ತ ಸಾಗಲಿದೆ ಎಂದಿದ್ದಾರೆ.

Previous articleಪೊಲೀಸರ ಮಕ್ಕಳಿಗಾಗಿ ನೂತನ 7 ಪಬ್ಲಿಕ್ ಶಾಲೆ ಘೋಷಿಸಿದ ಸಿಎಂ
Next articleದೀಪಾವಳಿ ಹಬ್ಬಕ್ಕಾಗಿ ವಿಶೇಷ ರೈಲು