Home ನಮ್ಮ ಜಿಲ್ಲೆ ಕಮಲ ತಬ್ಬಿದ ಕುಮಾರಣ್ಣ: ಡಿಕೆಶಿ ವ್ಯಂಗ್ಯ

ಕಮಲ ತಬ್ಬಿದ ಕುಮಾರಣ್ಣ: ಡಿಕೆಶಿ ವ್ಯಂಗ್ಯ

0

ಮಂಡ್ಯ: ಸಕ್ಕರೆ ನಾಡಿನ ಲೋಕಸಭಾ ಕ್ಷೇತ್ರಕ್ಕೆ ಹೊಸದಾಗಿ ಮಂಡ್ಯದ ಗಂಡು ರೆಡಿ ಮಾಡಿದ್ದೇವೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ತಮ್ಮ ಅಭ್ಯರ್ಥಿಯನ್ನು ಪರಿಚಯಿಸಿದ್ದಾರೆ.
ಮಂಡ್ಯದ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಭಾಷಣದ ಆರಂಭದಲ್ಲೇ ಸ್ಟಾರ್ ಚಂದ್ರು ಅವರನ್ನು ಪರಿಚಯ ಮಾಡಿಕೊಟ್ಟರು. ನಾನು, ಸಿದ್ದರಾಮಯ್ಯ ನಿಮ್ಮಿಂದ ಜೈಕಾರ, ಹೂ ಹಾರ ಹಾಕಿಸಿಕೊಳ್ಳಲು ಬಂದಿಲ್ಲ. 5 ಗ್ಯಾರಂಟಿ ಅನುಷ್ಠಾನಕ್ಕೆ ಕಾರಣಕರ್ತರಾದ ನಿಮಗೆ ಧನ್ಯವಾದ ಹೇಳಲು ಬಂದಿದ್ದೇವೆ.
ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡಲ್ಲ ಅವಕಾಶ ಮಾತ್ರ ಕೊಡುತ್ತಾನೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದಿದ್ದೆ. 5 ಗ್ಯಾರಂಟಿ ನೋಡಿ ಅರಳಿದ ಕಮಲ ಮುದುಡಿತು. ಕುಮಾರಣ್ಣ ತೆನೆ ಬಿಸಾಕಿ ಕಮಲ ತಬ್ಬಿದರು ಎಂದು ವ್ಯಂಗ್ಯವಾಡಿದರು.

Exit mobile version