ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು

0
16
ಸಾವು

ಬೆಂಗಳೂರು: ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಶಿವಮೊಗ್ಗದಲ್ಲಿ ಸರ್ಕಾರಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನ ಅಧಿಕಾರಿಯ ತಲೆಗೆ ಕಟ್ಟಲು ಹೋಗಿ ಕಿರುಕುಳ ನೀಡಿ ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ ಈ ಕೊಲೆಗಡುಕ ಕರ್ನಾಟಕ ಕಾಂಗ್ರೆಸ್‌ ಸರ್ಕಾರ. ಸಿಎಂ ಸಿದ್ದರಾಮಯ್ಯ ನವರೇ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂಪಾಯಿ ಎಸ್ ಸಿಎಸ್ ಪಿ/ಟಿಎಸ್ ಪಿ ಹಣವನ್ನ ಗ್ಯಾರೆಂಟಿ ಹೆಸರಿನಲ್ಲಿ ಲಪಟಾಯಿಸಿ ಈಗಾಗಲೇ ದಲಿತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದ್ದೀರಿ. ಈಗ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿ ಒಬ್ಬ ಅಧಿಕಾರಿಯ ಸಾವಿಗೆ ಕಾರಣರಾಗಿದ್ದೀರಿ.

ಸಿಎಂ ಸಿದ್ದರಾಮಯ್ಯನವರೇ, ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಿ ಈ ಪ್ರಕರಣದ ತನಿಖೆಗೆ ಆದೇಶ ಮಾಡಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿ ಎಂದಿದ್ದಾರೆ.

Previous articleಮುಳ್ಳು ಚುಚ್ಚಿದೆ ಅಂತಾ ಭಾವಿಸಿ…
Next articleರಾಹುಲ್ ಗಾಂಧಿ ಇದ್ದ ವೇದಿಕೆ ಕುಸಿತ…